ನ್ಯಾಯಸ್ಥಾಪಕರು 6:25 - ಪರಿಶುದ್ದ ಬೈಬಲ್25 ಅದೇ ರಾತ್ರಿ ಯೆಹೋವನು ಗಿದ್ಯೋನನೊಂದಿಗೆ ಮಾತನಾಡಿ, “ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನು ಮತ್ತು ಏಳು ವರ್ಷದ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಯು ಸುಳ್ಳುದೇವರಾದ ಬಾಳನಿಗೆ ಕಟ್ಟಿರುವ ಯಜ್ಞವೇದಿಕೆಯನ್ನು ಕೆಡವಿಬಿಡು; ಅದರ ಬಳಿಯಲ್ಲಿರುವ ಅಶೇರ ಎಂಬ ವಿಗ್ರಹಸ್ತಂಭವನ್ನು ಕಡಿದುಹಾಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದೇ ದಿನ ರಾತ್ರಿ ಸರ್ವೇಶ್ವರ ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆ ಕಟ್ಟಿರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರುಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡುಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹ ಸ್ತಂಭವನ್ನು ಕಡಿದುಹಾಕಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ, “ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೆಯದಾದ ಏಳು ವರ್ಷದ ಎರಡನೆಯ ಹೋರಿಯನ್ನು ತೆಗೆದುಕೊಂಡುಹೋಗಿ, ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ, ಅದರ ಸಮೀಪದಲ್ಲಿರುವ ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಅಧ್ಯಾಯವನ್ನು ನೋಡಿ |