ನ್ಯಾಯಸ್ಥಾಪಕರು 6:28 - ಪರಿಶುದ್ದ ಬೈಬಲ್28 ನಗರದ ಜನರು ಮರುದಿನ ಬೆಳಿಗ್ಗೆ ಎದ್ದಾಗ ಬಾಳನ ಯಜ್ಞವೇದಿಕೆಯು ಕೆಡವಲ್ಪಟ್ಟಿರುವುದನ್ನೂ ಅಶೇರಸ್ತಂಭವು ಕಡಿದು ಹಾಕಲ್ಪಟ್ಟಿರುವುದನ್ನೂ ನೋಡಿದರು. ಅಶೇರಸ್ತಂಭವು ಬಾಳನ ಯಜ್ಞವೇದಿಕೆಯ ಪಕ್ಕದಲ್ಲಿತ್ತು. ಗಿದ್ಯೋನನು ಕಟ್ಟಿದ್ದ ಯಜ್ಞವೇದಿಕೆಯನ್ನು ಸಹ ಅವರು ನೋಡಿದರು. ಯಜ್ಞವೇದಿಕೆಯ ಮೇಲೆ ಎರಡನೆಯ ಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಿರುವುದನ್ನೂ ಅವರು ನೋಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಊರಿನ ಜನರು ಬೆಳಿಗ್ಗೆ ಎದ್ದು ಬಾಳನ ಬಲಿಪೀಠ ಕೆಡವಲಾಗಿರುವುದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭ ಕಡಿಯಲಾಗಿರುವುದನ್ನೂ ಹೊಸದಾಗಿ ಕಟ್ಟಿದ ಬಲಿಪೀಠದ ಮೆಲೆ ಎರಡನೆಯ ಹೋರಿ ಬಲಿಯಾದದ್ದನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟದ್ದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹ ಸ್ತಂಭವು ಕಡಿಯಲ್ಪಟ್ಟದ್ದನ್ನೂ ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು. ಅಧ್ಯಾಯವನ್ನು ನೋಡಿ |
ನಗರದ ಜನರು ಒಬ್ಬರಿಗೊಬ್ಬರು, “ನಮ್ಮ ಯಜ್ಞವೇದಿಕೆಯನ್ನು ಯಾರು ಕೆಡವಿದರು? ನಮ್ಮ ಅಶೇರಸ್ತಂಭವನ್ನು ಯಾರು ಕಡಿದುಹಾಕಿದರು? ಈ ಹೊಸ ಯಜ್ಞವೇದಿಕೆಯ ಮೇಲೆ ಈ ಹೋರಿಯನ್ನು ಯಾರು ಸರ್ವಾಂಗಹೋಮ ಮಾಡಿದರು?” ಎಂಬ ಹಲವಾರು ಪ್ರಶ್ನೆಗಳನ್ನು ಕೇಳಿ ಇದೆಲ್ಲವನ್ನು ಮಾಡಿದವರು ಯಾರೆಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. “ಯೋವಾಷನ ಮಗನಾದ ಗಿದ್ಯೋನನು ಇದನ್ನೆಲ್ಲ ಮಾಡಿದನು” ಎಂದು ಯಾರೋ ಹೇಳಿದರು.
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.