Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:29 - ಪರಿಶುದ್ದ ಬೈಬಲ್‌

29 ನಗರದ ಜನರು ಒಬ್ಬರಿಗೊಬ್ಬರು, “ನಮ್ಮ ಯಜ್ಞವೇದಿಕೆಯನ್ನು ಯಾರು ಕೆಡವಿದರು? ನಮ್ಮ ಅಶೇರಸ್ತಂಭವನ್ನು ಯಾರು ಕಡಿದುಹಾಕಿದರು? ಈ ಹೊಸ ಯಜ್ಞವೇದಿಕೆಯ ಮೇಲೆ ಈ ಹೋರಿಯನ್ನು ಯಾರು ಸರ್ವಾಂಗಹೋಮ ಮಾಡಿದರು?” ಎಂಬ ಹಲವಾರು ಪ್ರಶ್ನೆಗಳನ್ನು ಕೇಳಿ ಇದೆಲ್ಲವನ್ನು ಮಾಡಿದವರು ಯಾರೆಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. “ಯೋವಾಷನ ಮಗನಾದ ಗಿದ್ಯೋನನು ಇದನ್ನೆಲ್ಲ ಮಾಡಿದನು” ಎಂದು ಯಾರೋ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸಿದರು. ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೀಗೆ ಮಾಡಿದವರಾರು ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅವರು ಒಬ್ಬರಿಗೊಬ್ಬರು, “ಈ ಕಾರ್ಯವನ್ನು ಮಾಡಿದವನ್ಯಾರು?” ಎಂದರು. ವಿಚಾರಿಸಿ ಕೇಳಿದಾಗ, ಅವರು, “ಯೋವಾಷನ ಮಗ ಗಿದ್ಯೋನನು ಈ ಕಾರ್ಯ ಮಾಡಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:29
4 ತಿಳಿವುಗಳ ಹೋಲಿಕೆ  

ನಗರದ ಜನರು ಮರುದಿನ ಬೆಳಿಗ್ಗೆ ಎದ್ದಾಗ ಬಾಳನ ಯಜ್ಞವೇದಿಕೆಯು ಕೆಡವಲ್ಪಟ್ಟಿರುವುದನ್ನೂ ಅಶೇರಸ್ತಂಭವು ಕಡಿದು ಹಾಕಲ್ಪಟ್ಟಿರುವುದನ್ನೂ ನೋಡಿದರು. ಅಶೇರಸ್ತಂಭವು ಬಾಳನ ಯಜ್ಞವೇದಿಕೆಯ ಪಕ್ಕದಲ್ಲಿತ್ತು. ಗಿದ್ಯೋನನು ಕಟ್ಟಿದ್ದ ಯಜ್ಞವೇದಿಕೆಯನ್ನು ಸಹ ಅವರು ನೋಡಿದರು. ಯಜ್ಞವೇದಿಕೆಯ ಮೇಲೆ ಎರಡನೆಯ ಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಿರುವುದನ್ನೂ ಅವರು ನೋಡಿದರು.


ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು.


ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು.


ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು