ನ್ಯಾಯಸ್ಥಾಪಕರು 6:3 - ಪರಿಶುದ್ದ ಬೈಬಲ್3 ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು, ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.