ನ್ಯಾಯಸ್ಥಾಪಕರು 6:30 - ಪರಿಶುದ್ದ ಬೈಬಲ್30 ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ಜನರು ಯೋವಾಷನಿಗೆ - ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಯಾಕಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ಕಡಿದು ಹಾಕಿದ್ದಾನೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು. ಅಧ್ಯಾಯವನ್ನು ನೋಡಿ |
ನಗರದ ಜನರು ಒಬ್ಬರಿಗೊಬ್ಬರು, “ನಮ್ಮ ಯಜ್ಞವೇದಿಕೆಯನ್ನು ಯಾರು ಕೆಡವಿದರು? ನಮ್ಮ ಅಶೇರಸ್ತಂಭವನ್ನು ಯಾರು ಕಡಿದುಹಾಕಿದರು? ಈ ಹೊಸ ಯಜ್ಞವೇದಿಕೆಯ ಮೇಲೆ ಈ ಹೋರಿಯನ್ನು ಯಾರು ಸರ್ವಾಂಗಹೋಮ ಮಾಡಿದರು?” ಎಂಬ ಹಲವಾರು ಪ್ರಶ್ನೆಗಳನ್ನು ಕೇಳಿ ಇದೆಲ್ಲವನ್ನು ಮಾಡಿದವರು ಯಾರೆಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. “ಯೋವಾಷನ ಮಗನಾದ ಗಿದ್ಯೋನನು ಇದನ್ನೆಲ್ಲ ಮಾಡಿದನು” ಎಂದು ಯಾರೋ ಹೇಳಿದರು.