Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:31 - ಪರಿಶುದ್ದ ಬೈಬಲ್‌

31 ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಷವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಷದವರನ್ನು ಬೆಳಗಾಗುವುದರೊಳಗೆ ಕೊಂದು ಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೋವಾಷನು ತನಗೆ ವಿರುದ್ಧವಾಗಿ ನಿಂತವರೆಲ್ಲರಿಗೆ, “ಬಾಳನ ಪರ ನೀವು ವ್ಯಾಜ್ಯಮಾಡಬೇಕೆ? ನೀವು ಅವನನ್ನು ರಕ್ಷಿಸಬೇಕೇ? ಅವನಿಗಾಗಿ ವ್ಯಾಜ್ಯಮಾಡುವವರು ಬೆಳಗಾಗುವಷ್ಟರಲ್ಲಿ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ - ಬಾಳನಿಗೋಸ್ಕರ ನೀವು ವ್ಯಾಜ್ಯವಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯವಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿ ಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:31
18 ತಿಳಿವುಗಳ ಹೋಲಿಕೆ  

ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.


ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.


ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.


ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು.


ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೊಸ ಹೆಸರನ್ನು ಕೊಟ್ಟನು.


“ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು