Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:33 - ಪರಿಶುದ್ದ ಬೈಬಲ್‌

33 ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಷ್ಟರಲ್ಲಿ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:33
21 ತಿಳಿವುಗಳ ಹೋಲಿಕೆ  

ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.


ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.


ಅವರು ಹಗ್ರೀಯರೊಂದಿಗೂ ಯೆಟೂರ್, ನಾಫೀಷ್ ಮತ್ತು ನೋದಾಬ್ ಊರಿನವರೊಂದಿಗೂ ಯುದ್ಧ ಮಾಡಿದರು.


ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು.


ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.


ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.


ಈ ಭೂಮಿಯನ್ನು ಆ ಕುಲದವರಿಗೆ ಕೊಡಲಾಯಿತು: ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು.


ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.


ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.


ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.”


ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು.


ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು