35 ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.
35 ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.
35 ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.
ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು.