Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:36 - ಪರಿಶುದ್ದ ಬೈಬಲ್‌

36 ಆಗ ಗಿದ್ಯೋನನು ದೇವರಿಗೆ, “ಇಸ್ರೇಲಿನ ಜನರನ್ನು ರಕ್ಷಿಸಲು ನೀನು ನನಗೆ ಸಹಾಯ ಮಾಡುವುದಾಗಿ ಹೇಳಿರುವೆ. ಅದಕ್ಕೆ ಸಾಕ್ಷ್ಯವನ್ನು ಈಗ ಒದಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಗಿದ್ಯೋನನು ದೇವರಿಗೆ, “ನೀವು ಹೇಳಿದಂತೆ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೋ ಇಲ್ಲವೋ ಎಂಬುದನ್ನು ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಮತ್ತು ಗಿದ್ಯೋನನು ದೇವರಿಗೆ - ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬದನ್ನು ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:36
12 ತಿಳಿವುಗಳ ಹೋಲಿಕೆ  

ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು.


ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.


ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.


ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು.


ಯೆಹೋವನು ಗಿದ್ಯೋನನಿಗೆ, “ನಾನು ನಿನ್ನ ಸಂಗಡವಿದ್ದೇನೆ! ಆದ್ದರಿಂದ ನೀನು ಮಿದ್ಯಾನ್ಯರನ್ನು ಸೋಲಿಸುವೆ. ಕೇವಲ ಒಬ್ಬನೊಂದಿಗೆ ಯುದ್ಧ ಮಾಡುತ್ತಿರುವಿಯೋ ಎಂಬಂತೆ ನಿನಗೆ ಅನಿಸುತ್ತದೆ” ಎಂದು ಹೇಳಿದನು.


ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಹಾಸುತ್ತೇನೆ. ನೆಲವೆಲ್ಲ ಒಣಗಿದ್ದು ಕೇವಲ ಕುರಿಯ ತುಪ್ಪಟದ ಮೇಲೆ ಇಬ್ಬನಿ ಬಿದ್ದರೆ, ನೀನು ಹೇಳಿದಂತೆಯೇ ಇಸ್ರೇಲನ್ನು ರಕ್ಷಿಸಲು ನನ್ನನ್ನು ಬಳಸುವೆ ಎಂದು ಅರಿತುಕೊಳ್ಳುವೆ” ಅಂದನು.


ಆದರೆ ಫಿಲಿಷ್ಟಿಯರು, ‘ನಮ್ಮ ಬಳಿಗೆ ಹತ್ತಿ ಬನ್ನಿ’ ಎಂದರೆ, ನಾವು ಅವರ ಬಳಿಗೆ ಹತ್ತಿ ಹೋಗೋಣ; ಯಾಕೆಂದರೆ ಅದು ದೇವರ ಗುರುತು. ದೇವರು ಅವರನ್ನು ಸೋಲಿಸಲು ನಮಗೆ ಅವಕಾಶ ಕಲ್ಪಿಸಿದ್ದಾನೆ ಎಂಬುದೇ ಅದರ ಅರ್ಥ” ಎಂದು ಹೇಳಿದನು.


ಯೆಹೋವನು ಅವನಿಗೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು