ನ್ಯಾಯಸ್ಥಾಪಕರು 6:4 - ಪರಿಶುದ್ದ ಬೈಬಲ್4 ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಾಜಾ ಪ್ರಾಂತದವರೆಗಿದ್ದ ಎಲ್ಲಾ ಭೂವಿುಯ ಹುಟ್ಟುವಳಿಯನ್ನು ಹಾಳುಮಾಡಿಬಿಟ್ಟದರಿಂದ ಇವರಿಗೆ ದವಸ ಧಾನ್ಯವಾಗಲಿ ಕುರಿದನಕತ್ತೆಗಳಾಗಲಿ ಉಳಿಯಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”