ನ್ಯಾಯಸ್ಥಾಪಕರು 6:6 - ಪರಿಶುದ್ದ ಬೈಬಲ್6 ಇಸ್ರೇಲರು ಮಿದ್ಯಾನ್ಯರಿಂದಾಗಿ ತುಂಬ ಬಡವರಾಗಿ ಬಿಟ್ಟರು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಮಿದ್ಯಾನ್ಯರ ನಿಮಿತ್ತ ಇಸ್ರಯೇಲರು ಬಹಳವಾಗಿ ಕುಗ್ಗಿಹೋಗಿ ಸರ್ವೇಶ್ವರನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಸ್ರಾಯೇಲ್ಯರು ವಿುದ್ಯಾನ್ಯರ ದೆಸೆಯಿಂದ ಬಲು ಕುಗ್ಗಿ ಹೋಗಿ ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದಕಾರಣ ಇಸ್ರಾಯೇಲರು ಮಿದ್ಯಾನ್ಯರಿಂದ ಬಹಳ ಬಡವರಾದರು. ಆಗ ಇಸ್ರಾಯೇಲರು ಯೆಹೋವ ದೇವರಿಗೆ ಬೇಡಿಕೊಂಡರು. ಅಧ್ಯಾಯವನ್ನು ನೋಡಿ |
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.