ನ್ಯಾಯಸ್ಥಾಪಕರು 7:11 - ಪರಿಶುದ್ದ ಬೈಬಲ್11 ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು. ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಅವರ ಮೇಲೆ ಬೀಳುವದಕ್ಕೆ ನಿನಗೆ ಧೈರ್ಯ ಬರುವದು ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಮಾತನಾಡುವುದನ್ನು ಕೇಳು. ತರುವಾಯ ಪಾಳೆಯಲ್ಲಿ ಇಳಿದು ಹೋಗುವುದಕ್ಕೆ ನಿನ್ನ ಕೈಗಳು ಬಲಗೊಳ್ಳುವುವು,” ಎಂದರು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ಪಾಳೆಯ ಹೊರಗಿರುವ ಸೈನಿಕರ ಬಳಿಗೆ ಹೋದನು. ಅಧ್ಯಾಯವನ್ನು ನೋಡಿ |