ನ್ಯಾಯಸ್ಥಾಪಕರು 7:13 - ಪರಿಶುದ್ದ ಬೈಬಲ್13 ಗಿದ್ಯೋನನು ಶತ್ರುಗಳ ಪಾಳೆಯಕ್ಕೆ ಬಂದಾಗ ಒಬ್ಬನ ಮಾತನ್ನು ಕೇಳಿಸಿಕೊಂಡನು. ಆ ಮನುಷ್ಯನು ತಾನು ಕಂಡ ಒಂದು ಕನಸಿನ ಬಗ್ಗೆ ತನ್ನ ಮಿತ್ರನಿಗೆ ಹೇಳುತ್ತಿದ್ದನು. “ನಾನು ಕನಸಿನಲ್ಲಿ ಒಂದು ದುಂಡಾದ ರೊಟ್ಟಿಯು ಉರುಳಿಕೊಂಡು ಮಿದ್ಯಾನ್ಯರ ಪಾಳೆಯದಲ್ಲಿ ಬರುವುದನ್ನು ಕಂಡೆ. ಆ ರೊಟ್ಟಿಯು ರಭಸದಿಂದ ಬಂದು ಒಂದು ಗುಡಾರಕ್ಕೆ ಅಪ್ಪಳಿಸಲು ಆ ಗುಡಾರವು ಕುಸಿದುಬಿತ್ತು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆ; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿ ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿಬಿಟ್ಟಿತು,” ಎಂದು ಹೇಳಿದನು. ಅವನ ಜೊತೆಗಾರನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು - ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ವಿುದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿ ಬಿಟ್ಟಿತು ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಗಿದ್ಯೋನನು ಬಂದಾಗ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇನೆಂದರೆ, “ಇಗೋ, ನಾನು ಒಂದು ಕನಸನ್ನು ಕಂಡೆನು. ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾನ್ಯರ ಪಾಳೆಯ ಮೇಲೆ ಹೊರಳಿ, ಒಂದು ಡೇರೆಯ ಮೇಲೆ ಬಂದು, ಅದು ಬೀಳುವ ಹಾಗೆ ಅದನ್ನು ಹೊಡೆದು, ಅದನ್ನು ಕೆಡವಿ ಹಾಕಿತು. ಆಗ ಡೇರೆಯು ಬಿದ್ದುಹೋಯಿತು,” ಎಂದನು. ಅಧ್ಯಾಯವನ್ನು ನೋಡಿ |
ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.