ನ್ಯಾಯಸ್ಥಾಪಕರು 7:15 - ಪರಿಶುದ್ದ ಬೈಬಲ್15 ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.