Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:17 - ಪರಿಶುದ್ದ ಬೈಬಲ್‌

17 ಗಿದ್ಯೋನನು ಅವರಿಗೆ, “ನನ್ನನ್ನು ಗಮನಿಸುತ್ತಾ ನಾನು ಮಾಡಿದಂತೆ ಮಾಡಿರಿ. ಶತ್ರುಗಳ ಪಾಳೆಯದ ಸೀಮೆಯವರೆಗೆ ನನ್ನನ್ನು ಹಿಂಬಾಲಿಸಿ ಬನ್ನಿ. ನಾನು ಪಾಳೆಯದ ಗಡಿಯನ್ನು ಮುಟ್ಟಿದ ಮೇಲೆ ನಾನು ಮಾಡಿದಂತೆಯೇ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರಿಗೆ - ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅನಂತರ ಗಿದ್ಯೋನನು, “ನಾನು ಮಾಡುವುದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ನಾನು ಪಾಳೆಯ ಹೊರಗೆ ಬಂದಾಗ ಹೇಗೆ ಮಾಡುವೆನೋ, ಹಾಗೆಯೇ ನೀವೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:17
7 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನ ಮಾದರಿಯನ್ನು ಅನುಸರಿಸುವಂತೆ ನೀವೂ ನನ್ನ ಮಾದರಿಯನ್ನು ಅನುಸರಿಸಿರಿ.


ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.


ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.


ನೀವು ಶತ್ರುಗಳ ಪಾಳೆಯಕ್ಕೆ ಮುತ್ತಿಗೆ ಹಾಕಿರಿ. ನನ್ನ ಸಂಗಡವಿರುವ ಜನರು ತುತ್ತೂರಿಯನ್ನು ಊದುವರು. ನಾವು ನಮ್ಮ ತುತ್ತೂರಿಗಳನ್ನು ಊದಿದಾಗ ನೀವು ಸಹ ನಿಮ್ಮ ತುತ್ತೂರಿಗಳನ್ನು ಊದಿರಿ. ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ,’ ಎಂದು ಕೂಗಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು