ನ್ಯಾಯಸ್ಥಾಪಕರು 7:2 - ಪರಿಶುದ್ದ ಬೈಬಲ್2 ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು. ಅಧ್ಯಾಯವನ್ನು ನೋಡಿ |
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.