ನ್ಯಾಯಸ್ಥಾಪಕರು 7:20 - ಪರಿಶುದ್ದ ಬೈಬಲ್20 ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಸರ್ವೇಶ್ವರನಿಗೆ ಪರಾಕು” ಎಂದು ಕೂಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು - ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು. ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.