Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:22 - ಪರಿಶುದ್ದ ಬೈಬಲ್‌

22 ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:22
18 ತಿಳಿವುಗಳ ಹೋಲಿಕೆ  

ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.


ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಬೆಟ್ಟಪ್ರದೇಶದವರೊಂದಿಗೆ ಹೋರಾಡಲಾರಂಭಿಸಿ ಅವರನ್ನು ಕೊಂದು ನಾಶಪಡಿಸಿದರು. ಅವರು ಸೇಯೀರ್ ಬೆಟ್ಟಪ್ರದೇಶದವರನ್ನು ಕೊಂದ ಬಳಿಕ ತಮ್ಮಲ್ಲಿ ತಾವೇ ಒಬ್ಬರನ್ನೊಬ್ಬರು ಕೊಂದರು.


ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.


ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.


ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.


ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ಈ ನಗರವನ್ನು ನಿಮಗೆ ಕೊಟ್ಟಿದ್ದಾನೆ.


ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಸೌಲನ ಮಗಳಾದ ಮೇರಾಬಳಿಗೆ ದಾವೀದನನ್ನು ಮದುವೆಯಾಗುವ ಕಾಲ ಬಂದಾಗ, ಸೌಲನು ಅವಳನ್ನು ಮೆಹೋಲದ ಅದ್ರೀಯೇಲನಿಗೆ ಮದುವೆ ಮಾಡಿಕೊಟ್ಟನು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು.


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.


ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು