ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.