ನ್ಯಾಯಸ್ಥಾಪಕರು 7:24 - ಪರಿಶುದ್ದ ಬೈಬಲ್24 ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು. ಅಧ್ಯಾಯವನ್ನು ನೋಡಿ |
ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,