25 ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.
25 ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
25 ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೂ ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಜೋರ್ಡನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
25 ಇದಲ್ಲದೆ ಅವರು ವಿುದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೆಯೂ ಜೇಬನನ್ನು ಜೇಬನ ದ್ರಾಕ್ಷೆಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ವಿುದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.
ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.
ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.