ನ್ಯಾಯಸ್ಥಾಪಕರು 7:3 - ಪರಿಶುದ್ದ ಬೈಬಲ್3 ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ - ಧೈರ್ಯವಿಲ್ಲದವರೂ ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು. ಅಧ್ಯಾಯವನ್ನು ನೋಡಿ |
ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.