Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:4 - ಪರಿಶುದ್ದ ಬೈಬಲ್‌

4 ಆಗ ಯೆಹೋವನು ಗಿದ್ಯೋನನಿಗೆ, “ಇನ್ನೂ ಬಹಳಷ್ಟು ಜನರಿದ್ದಾರೆ. ಇವರನ್ನು ನೀನು ನದಿಗೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗಾಗಿ ಪರೀಕ್ಷಿಸುತ್ತೇನೆ. ‘ಯಾವನು ನಿನ್ನ ಜೊತೆಯಲ್ಲಿ ಹೋಗಬಹುದು’ ಎಂದು ನಾನು ಹೇಳುತ್ತೇನೋ ಅವನು ಹೋಗಲಿ. ‘ಯಾವನು ನಿನ್ನ ಜೊತೆಯಲ್ಲಿ ಹೋಗುವುದು ಬೇಡ’ ಎಂದು ನಾನು ಹೇಳುತ್ತೇನೋ ಅವನು ಹೋಗದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಪುನಃ ಗಿದ್ಯೋನನಿಗೆ, “ನಿನ್ನ ಬಳಿ ಇರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಒಂದು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗಾಗಿ ಆರಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ. ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತಿರಿಗಿ ಗಿದ್ಯೋನನಿಗೆ - ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗೋಸ್ಕರ ಪರೀಕ್ಷಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಗಿದ್ಯೋನನಿಗೆ, “ಜನರು ಇನ್ನೂ ತುಂಬ ಇದ್ದರೆ; ಅವರನ್ನು ಹತ್ತಿರದ ಹಳ್ಳಕ್ಕೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡಿ ಆರಿಸುವೆನು. ನಿನ್ನ ಸಂಗಡ ಹೋಗುವವರಲ್ಲಿ ಯಾವನನ್ನು ಕುರಿತು ಹೇಳುವೆನೋ, ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು ನಿನ್ನ ಸಂಗಡ ಬರಬಾರದೆಂದು ಯಾವನನ್ನು ಕುರಿತು ಹೇಳುವೆನೋ, ಅವನು ಹೋಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:4
10 ತಿಳಿವುಗಳ ಹೋಲಿಕೆ  

ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.


ಆದ್ದರಿಂದ ಗಿದ್ಯೋನನು ಅವರನ್ನು ನದಿಯ ಹತ್ತಿರ ಕರೆದುಕೊಂಡು ಹೋದನು. ಅಲ್ಲಿ ಯೆಹೋವನು ಗಿದ್ಯೋನನಿಗೆ, “ನೀರನ್ನು ನಾಯಿಯಂತೆ ತಮ್ಮ ನಾಲಿಗೆಯಿಂದ ನೆಕ್ಕಿ ಕುಡಿಯುವವರನ್ನು ಒಂದು ಗುಂಪನ್ನಾಗಿ ಮತ್ತು ನೆಲಕ್ಕೆ ಮೊಣಕಾಲೂರಿ ನೀರನ್ನು ಕುಡಿಯುವವರನ್ನು ಇನ್ನೊಂದು ಗುಂಪನ್ನಾಗಿ ವಿಂಗಡಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು