ನ್ಯಾಯಸ್ಥಾಪಕರು 7:5 - ಪರಿಶುದ್ದ ಬೈಬಲ್5 ಆದ್ದರಿಂದ ಗಿದ್ಯೋನನು ಅವರನ್ನು ನದಿಯ ಹತ್ತಿರ ಕರೆದುಕೊಂಡು ಹೋದನು. ಅಲ್ಲಿ ಯೆಹೋವನು ಗಿದ್ಯೋನನಿಗೆ, “ನೀರನ್ನು ನಾಯಿಯಂತೆ ತಮ್ಮ ನಾಲಿಗೆಯಿಂದ ನೆಕ್ಕಿ ಕುಡಿಯುವವರನ್ನು ಒಂದು ಗುಂಪನ್ನಾಗಿ ಮತ್ತು ನೆಲಕ್ಕೆ ಮೊಣಕಾಲೂರಿ ನೀರನ್ನು ಕುಡಿಯುವವರನ್ನು ಇನ್ನೊಂದು ಗುಂಪನ್ನಾಗಿ ವಿಂಗಡಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಸರ್ವೇಶ್ವರ ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ - ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲುಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಗಿದ್ಯೋನನು ಜನರನ್ನು ಹಳ್ಳದ ಬಳಿಗೆ ಕರಕೊಂಡು ಬಂದನು. ಆಗ ಯೆಹೋವ ದೇವರು ಗಿದ್ಯೋನನಿಗೆ, “ನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ, ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗುವ ಪ್ರತಿಯೊಬ್ಬನನ್ನೂ ಬೇರೆಬೇರೆಯಾಗಿ ನಿಲ್ಲಿಸು,” ಎಂದರು. ಅಧ್ಯಾಯವನ್ನು ನೋಡಿ |