ನ್ಯಾಯಸ್ಥಾಪಕರು 7:7 - ಪರಿಶುದ್ದ ಬೈಬಲ್7 ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಸರ್ವೇಶ್ವರ ಗಿದ್ಯೋನನಿಗೆ, “ನೀರನ್ನು ನೆಕ್ಕಿದ ಆ ಮೂನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಯೆಹೋವನು ಗಿದ್ಯೋನನಿಗೆ - ನೀರನ್ನು ನೆಕ್ಕಿದ ಆ ಮುನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ವಿುದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೆಹೋವ ದೇವರು ಗಿದ್ಯೋನನಿಗೆ, “ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ, ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸುವೆನು. ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದರು. ಅಧ್ಯಾಯವನ್ನು ನೋಡಿ |