Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:8 - ಪರಿಶುದ್ದ ಬೈಬಲ್‌

8 ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಯೇಲರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗಾಗಿ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಜನರು ಆಹಾರವನ್ನೂ, ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು. ಆದರೆ ಗಿದ್ಯೋನನು ಇಸ್ರಾಯೇಲರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ, ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳಭಾಗದ ಕಣಿವೆಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:8
11 ತಿಳಿವುಗಳ ಹೋಲಿಕೆ  

ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.


ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.


ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.


“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.


ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.


“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನವಾಗಿರಬೇಕು. ಆಗ ನೀವು ಪವಿತ್ರಸಭೆಯಾಗಿ ಸೇರಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಊದಿಸಬೇಕು.


ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು.


ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು