Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:9 - ಪರಿಶುದ್ದ ಬೈಬಲ್‌

9 ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದೇ ರಾತ್ರಿ ಸರ್ವೇಶ್ವರ ಗಿದ್ಯೋನ್ಯನಿಗೆ, “ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:9
23 ತಿಳಿವುಗಳ ಹೋಲಿಕೆ  

ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಯಲ್ಲಿರುವಾಗ


ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.


ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.


ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.


ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.


ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು.


ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಯೋನಾತಾನನು, “ನಾವು ಕಣಿವೆಯನ್ನು ದಾಟಿ ಫಿಲಿಷ್ಟಿಯ ಕಾವಲುಗಾರರ ಕಡೆಗೆ ಹೋಗಿ ಅವರಿಗೆ ಕಾಣಿಸಿಕೊಳ್ಳೋಣ.


ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು