ನ್ಯಾಯಸ್ಥಾಪಕರು 8:1 - ಪರಿಶುದ್ದ ಬೈಬಲ್1 ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನಂತರ ಎಫ್ರಯಿಮ್ಯರು ಗಿದ್ಯೋನನಿಗೆ, “ನೀನು ಹೀಗೇಕೆ ಮಾಡಿದೆ? ಮಿದ್ಯಾನ್ಯರೊಡನೆ ಯುದ್ಧ ಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರ ವಾಗ್ವಾದ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ - ನೀನು ಹೀಗೆ ಯಾಕೆ ಮಾಡಿದಿ? ವಿುದ್ಯಾನ್ಯರೊಡನೆ ಯುದ್ಧಮಾಡುವದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ ಎಂದು ಉಗ್ರದಿಂದ ಕಲಹಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಎಫ್ರಾಯೀಮ್ಯರು, “ನೀನು ಮಿದ್ಯಾನ್ಯರ ಮೇಲೆ ಯುದ್ಧಮಾಡುವುದಕ್ಕೆ ಹೋಗುವಾಗ, ನಮ್ಮನ್ನು ಕರೆಯದೆ ಹೋದದ್ದೇನು?” ಎಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು. ಅಧ್ಯಾಯವನ್ನು ನೋಡಿ |