Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:10 - ಪರಿಶುದ್ದ ಬೈಬಲ್‌

10 ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:10
17 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.


ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.


ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು.


ಯೆಹೋವನು ಇಸ್ರೇಲಿನ ಸೈನ್ಯದಿಂದ ಬೆನ್ಯಾಮೀನ್ಯರ ಸೈನ್ಯವನ್ನು ಸೋಲಿಸಿದನು. ಆ ದಿನ ಇಸ್ರೇಲಿ ಸೈನಿಕರು ಬೆನ್ಯಾಮೀನ್ಯರ ಇಪ್ಪತೈದು ಸಾವಿರದ ನೂರು ಸೈನಿಕರನ್ನು ಕೊಂದುಹಾಕಿದರು. ಆ ಸೈನಿಕರೆಲ್ಲಾ ಯುದ್ಧದ ತರಬೇತಿ ಪಡೆದವರಾಗಿದ್ದರು.


ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.


ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು.


ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.


ಇಸ್ರೇಲಿನ ಎಲ್ಲ ಕುಲಾಧಿಪತಿಗಳು ಅಲ್ಲಿದ್ದರು. ಅವರು ದೈವಭಕ್ತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಯುದ್ಧ ಸನ್ನದ್ಧರಾದ ನಾಲ್ಕು ಲಕ್ಷ ಜನರು ಅಲ್ಲಿದ್ದರು.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.


ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.


ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.


ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.


ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ.


ಗಿದ್ಯೋನನು ಶತ್ರುಗಳ ಪಾಳೆಯಕ್ಕೆ ಬಂದಾಗ ಒಬ್ಬನ ಮಾತನ್ನು ಕೇಳಿಸಿಕೊಂಡನು. ಆ ಮನುಷ್ಯನು ತಾನು ಕಂಡ ಒಂದು ಕನಸಿನ ಬಗ್ಗೆ ತನ್ನ ಮಿತ್ರನಿಗೆ ಹೇಳುತ್ತಿದ್ದನು. “ನಾನು ಕನಸಿನಲ್ಲಿ ಒಂದು ದುಂಡಾದ ರೊಟ್ಟಿಯು ಉರುಳಿಕೊಂಡು ಮಿದ್ಯಾನ್ಯರ ಪಾಳೆಯದಲ್ಲಿ ಬರುವುದನ್ನು ಕಂಡೆ. ಆ ರೊಟ್ಟಿಯು ರಭಸದಿಂದ ಬಂದು ಒಂದು ಗುಡಾರಕ್ಕೆ ಅಪ್ಪಳಿಸಲು ಆ ಗುಡಾರವು ಕುಸಿದುಬಿತ್ತು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು