ನ್ಯಾಯಸ್ಥಾಪಕರು 8:11 - ಪರಿಶುದ್ದ ಬೈಬಲ್11 ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಪೂರ್ವದಲ್ಲಿದ್ದ ಡೇರೆಗಳಲ್ಲಿ ಸುರಕ್ಷಿತವಾಗಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಅವರು ನಿರೀಕ್ಷಿಸದ ಸಮಯದಲ್ಲಿ ಅವರ ಮೇಲೆ ದಾಳಿಮಾಡಿದರು. ಅಧ್ಯಾಯವನ್ನು ನೋಡಿ |