Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:16 - ಪರಿಶುದ್ದ ಬೈಬಲ್‌

16 ಗಿದ್ಯೋನನು ಸುಖೋತ್ ನಗರದ ಹಿರಿಯರಿಗೆ ಮರುಭೂಮಿಯ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡೆಸಿ ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೋಡಿರಿ, ಅವರು ಇಲ್ಲಿರುತ್ತಾರೆ” ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೋಡಿ, ಅವರು ಇಲ್ಲಿರುತ್ತಾರೆ” ಎಂದು ಊರಿನ ಹಿರಿಯರನ್ನೂ ಮುಖಂಡರನ್ನೂ ಜಾಲಿಮುಳ್ಳು ಹಾಗು ಕಾರೆ ಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೋಡಿರಿ, ಅವರು ಇಲ್ಲಿರುತ್ತಾರೆ ಅಂದು ಊರಿನ ಹಿರಿಯರನ್ನೂ ಮುಖಂಡರನ್ನೂ ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪಟ್ಟಣದ ಹಿರಿಯರನ್ನು ಮತ್ತು ಸುಕ್ಕೋತಿನವರನ್ನು ಹಿಡಿದು, ಮರುಭೂಮಿಯ ಮುಳ್ಳು ಹಾಗು ಕಾರೆಗಿಡದ ಮುಳ್ಳುಗಳಿಂದ ದಂಡಿಸಿ ಅವರಿಗೆ ಪಾಠ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:16
7 ತಿಳಿವುಗಳ ಹೋಲಿಕೆ  

ಅದಕ್ಕೆ ಗಿದ್ಯೋನನು, “ನೀವು ನಮಗೆ ಆಹಾರವನ್ನು ಕೊಡುವುದಿಲ್ಲವಾದರೆ ಜೆಬಹನನ್ನು ಮತ್ತು ಚಲ್ಮುನ್ನನನ್ನು ಬಂಧಿಸಲು ಯೆಹೋವನೇ ನಮಗೆ ಸಹಾಯ ಮಾಡುತ್ತಾನೆ. ಆಮೇಲೆ ನಾನು ಇಲ್ಲಿಗೆ ಬಂದು ನಿಮ್ಮನ್ನು ಮರುಳುಗಾಡಿನ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡಿಸುತ್ತೇನೆ” ಎಂದು ಉತ್ತರಿಸಿದನು.


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.


ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.


ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು 2,812


ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.


ಗಿದ್ಯೋನನು ಪೆನೂವೇಲಿನ ಬುರುಜನ್ನೂ ಸಹ ಕೆಡವಿ ಆ ಪಟ್ಟಣದ ಜನರನ್ನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು