18 ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು.
18 ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.
18 ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.
18 ಮತ್ತು ಅವನು ಜೆಬಹ, ಚಲ್ಮುನ್ನ ಎಂಬವರನ್ನು - ನೀವು ತಾಬೋರದಲ್ಲಿ ಕೊಂದು ಹಾಕಿದ ಮನುಷ್ಯರು ಹೇಗಿದ್ದರು ಎಂದು ಕೇಳಲಾಗಿ ಅವರು ಅವನಿಗೆ - ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು ಎಂದು ಉತ್ತರಕೊಟ್ಟರು.
18 ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.
ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದೆ ಇದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.