ನ್ಯಾಯಸ್ಥಾಪಕರು 8:19 - ಪರಿಶುದ್ದ ಬೈಬಲ್19 ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದೆ ಇದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಸರ್ವೇಶ್ವರನ ಆಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಅವನು - ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿದ್ದಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕವನು, “ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು. ಯೆಹೋವ ದೇವರ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.