ನ್ಯಾಯಸ್ಥಾಪಕರು 8:21 - ಪರಿಶುದ್ದ ಬೈಬಲ್21 ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |
ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.