Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:22 - ಪರಿಶುದ್ದ ಬೈಬಲ್‌

22 ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಳ್ವಿಕೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತರುವಾಯ ಇಸ್ರಯೇಲರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲವೇ? ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ - ನೀನು ನಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:22
7 ತಿಳಿವುಗಳ ಹೋಲಿಕೆ  

ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.


ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ.


ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.


ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.


ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಗಿದ್ಯೋನನು ಇಸ್ರೇಲರಿಗೆ, “ಯೆಹೋವನು ನಿಮ್ಮನ್ನು ಆಳುತ್ತಾನೆ. ನಾನು ನಿಮ್ಮನ್ನು ಆಳುವುದಿಲ್ಲ; ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು