ನ್ಯಾಯಸ್ಥಾಪಕರು 8:23 - ಪರಿಶುದ್ದ ಬೈಬಲ್23 ಗಿದ್ಯೋನನು ಇಸ್ರೇಲರಿಗೆ, “ಯೆಹೋವನು ನಿಮ್ಮನ್ನು ಆಳುತ್ತಾನೆ. ನಾನು ನಿಮ್ಮನ್ನು ಆಳುವುದಿಲ್ಲ; ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಸರ್ವೇಶ್ವರನೇ ನಿಮ್ಮ ಅರಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನು ಅವರಿಗೆ - ನಾನಾಗಲಿ ನನ್ನ ಮಗನಾಗಲಿ ನಿಮ್ಮನ್ನು ಆಳುವದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಗಿದ್ಯೋನನು ಅವರಿಗೆ, “ನಾನು ನಿಮ್ಮನ್ನು ಆಳುವುದಿಲ್ಲ. ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ. ಯೆಹೋವ ದೇವರೇ ನಿಮ್ಮನ್ನು ಆಳುವರು.” ಅಧ್ಯಾಯವನ್ನು ನೋಡಿ |
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.