Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:27 - ಪರಿಶುದ್ದ ಬೈಬಲ್‌

27 ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:27
26 ತಿಳಿವುಗಳ ಹೋಲಿಕೆ  

ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು.


ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.


ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು.


ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.


ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿದ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ಆ ದೇಶದಲ್ಲಿ ಶಾಂತಿ ನೆಲೆಸಿತ್ತು.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”


ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.


“ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು