ನ್ಯಾಯಸ್ಥಾಪಕರು 8:3 - ಪರಿಶುದ್ದ ಬೈಬಲ್3 ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೇವರು ಮಿದ್ಯಾನ್ಯರ ನಾಯಕರಾದ ಓರೇಬ್ ಮತ್ತು ಜೇಬರನ್ನೇ ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರಲ್ಲವೆ; ಇದಕ್ಕೆ ಸರಿಸಮಾನವಾದದ್ದನ್ನು ನಾನೇನು ಮಾಡಿದ್ದೇನೆ? ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರ ಸಿಟ್ಟಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವರು ನಿಮ್ಮ ಕೈಯಲ್ಲಿ ವಿುದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನನ್ನೂ, ಜೇಬನನ್ನೂ ಒಪ್ಪಿಸಿಕೊಡಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು?” ಎಂದನು. ಅವನು ಈ ಮಾತು ಹೇಳಿದಾಗ, ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು. ಅಧ್ಯಾಯವನ್ನು ನೋಡಿ |
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.