Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:32 - ಪರಿಶುದ್ದ ಬೈಬಲ್‌

32 ಯೋವಾಷನ ಮಗನಾದ ಗಿದ್ಯೋನನು ದಿನ ತುಂಬಿದ ಮುದುಕನಾಗಿ ಮರಣಹೊಂದಿದನು. ಗಿದ್ಯೋನನ ಶವವನ್ನು ಅವನ ತಂದೆಯಾದ ಯೋವಾಷನಿಗೆ ಸೇರಿದ್ದ ಒಂದು ಸಮಾಧಿಯಲ್ಲಿ ಹೂಳಿಟ್ಟರು. ಆ ಸಮಾಧಿಯು ಅಬೀಯೆಜೆರ್ ಕುಟುಂಬದವರ ಒಫ್ರದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೋವಾಷನ ಮಗನಾದ ಗಿದ್ಯೋನನು ಹಣ್ಣು ಹಣ್ಣು ಮುದುಕನಾಗಿ ಮರಣಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿ ಅವನ ತಂದೆ ಆದ ಯೋವಾಷನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೋವಾಷನ ಮಗನಾದ ಗಿದ್ಯೋನನು ಒಳ್ಳೆಯ ವೃದ್ಧಾಪ್ಯದಲ್ಲಿ ಮರಣಹೊಂದಿದಾಗ, ಅವನನ್ನು ಅಬೀಯೆಜೆರೀಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಳಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:32
10 ತಿಳಿವುಗಳ ಹೋಲಿಕೆ  

ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.


ತರುವಾಯ ಯೋಬನು ಮುಪ್ಪಿನ ಮುದುಕನಾಗಿ ತೀರಿಕೊಂಡನು.


ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.


ಗಿದ್ಯೋನನಿಗೆ ಒಬ್ಬ ಉಪಪತ್ನಿಯೂ ಇದ್ದಳು. ಅವಳು ಶೆಕೆಮಿನಲ್ಲಿರುತ್ತಿದ್ದಳು. ಅವಳಲ್ಲಿ ಅವನಿಗೆ ಒಬ್ಬ ಮಗನು ಹುಟ್ಟಿದನು. ಗಿದ್ಯೋನನು ಅವನಿಗೆ ಅಬೀಮೆಲೆಕ ಎಂದು ಹೆಸರಿಟ್ಟನು.


ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು