Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:35 - ಪರಿಶುದ್ದ ಬೈಬಲ್‌

35 ಯೆರುಬ್ಬಾಳನು ಅನೇಕ ಸತ್ಕಾರ್ಯಗಳನ್ನು ಮಾಡಿದರೂ ಸಹ ಇಸ್ರೇಲರು ಅವನ ಕುಟುಂಬದವರಿಗೆ ಕೃತಜ್ಞತೆಯುಳ್ಳವರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಸ್ಮರಿಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:35
6 ತಿಳಿವುಗಳ ಹೋಲಿಕೆ  

ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ.


ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೊಸ ಹೆಸರನ್ನು ಕೊಟ್ಟನು.


ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು


ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು