23-24 ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.
ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.
ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.
ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.