ನ್ಯಾಯಸ್ಥಾಪಕರು 9:26 - ಪರಿಶುದ್ದ ಬೈಬಲ್26 ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸೆ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆವಿುಗೆ ಬಂದನು. ಶೆಕೆವಿುನ ಹಿರಿಯರು ಅವನಲ್ಲಿ ಭರವಸವಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು, ಅಧ್ಯಾಯವನ್ನು ನೋಡಿ |
ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)