Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:3 - ಪರಿಶುದ್ದ ಬೈಬಲ್‌

3 ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಿದರು. ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲವೆ” ಎಂದುಕೊಂಡು ಅವನ ಪಕ್ಷವಹಿಸಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಶೆಕೆವಿುನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು - ಇವನು ನಮ್ಮ ಸಹೋದರನಾಗಿದ್ದಾನಲ್ಲಾ ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವದಕ್ಕೆ ಒಡಂಬಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಹಿರಿಯರೆಲ್ಲರೂ ಕೇಳುವಂತೆ ಈ ಮಾತುಗಳನ್ನೆಲ್ಲಾ ಹೇಳಿದರು. ಅವರು, “ಇವನು ನಮ್ಮ ಸಹೋದರನು,” ಎಂದು ಹೇಳಿದ್ದರಿಂದ, ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:3
4 ತಿಳಿವುಗಳ ಹೋಲಿಕೆ  

ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು