ನ್ಯಾಯಸ್ಥಾಪಕರು 9:41 - ಪರಿಶುದ್ದ ಬೈಬಲ್41 ಅನಂತರ ಅಬೀಮೆಲೆಕನು ಅರೂಮ ನಗರಕ್ಕೆ ಹಿಂದಿರುಗಿದನು. ಜೆಬುಲನು ಗಾಳನನ್ನು ಮತ್ತು ಅವನ ಸಹೋದರರನ್ನು ಶೆಕೆಮ್ ನಗರದಿಂದ ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಿಸಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಅಟ್ಟಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಿಸಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆವಿುನಿಂದ ಅಟ್ಟಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು. ಆದರೆ ಜೆಬೂಲನು ಗಾಳನನ್ನೂ, ಅವನ ಸಹೋದರರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿ |
ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)