ನ್ಯಾಯಸ್ಥಾಪಕರು 9:49 - ಪರಿಶುದ್ದ ಬೈಬಲ್49 ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅವರೂ ಅದರಂತೆಯೇ ಮಾಡಿದರು. ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಸ್ತ್ರೀಪುರುಷರೆಲ್ಲಾ ಸೇರಿ ಅವರು ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಅವರೂ ಅದರಂತೆಯೇ ಮಾಡಿ ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‍ಕೋಟೆಯವರೆಲ್ಲರೂ ಸತ್ತರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. ಅಧ್ಯಾಯವನ್ನು ನೋಡಿ |