Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:5 - ಪರಿಶುದ್ದ ಬೈಬಲ್‌

5 ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:5
15 ತಿಳಿವುಗಳ ಹೋಲಿಕೆ  

ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ದೇವದೂತನು ಅವನಿಗೆ, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋಗು. ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದವರು ಸತ್ತುಹೋದರು” ಎಂದು ಹೇಳಿದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.


ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.


ಗಿದ್ಯೋನನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವನಿಗೆ ಅನೇಕ ಹೆಂಡತಿಯರಿದ್ದರು.


ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ.


ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.


ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.


ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು