Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:52 - ಪರಿಶುದ್ದ ಬೈಬಲ್‌

52 ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಗೋಪುರದ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:52
5 ತಿಳಿವುಗಳ ಹೋಲಿಕೆ  

ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.


ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.


ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು.


ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು