ನ್ಯಾಯಸ್ಥಾಪಕರು 9:53 - ಪರಿಶುದ್ದ ಬೈಬಲ್53 ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಒಬ್ಬ ಸ್ತ್ರೀ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಒಬ್ಬ ಸ್ತ್ರೀಯು ಮೇಲಣಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿದಳು. ಅದರಿಂದ ಅವನ ತಲೆಯನ್ನು ಒಡೆದು ಹಾಕಿದಳು. ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು.