Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:54 - ಪರಿಶುದ್ದ ಬೈಬಲ್‌

54 ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:54
17 ತಿಳಿವುಗಳ ಹೋಲಿಕೆ  

ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದ್ದರಿಂದ ಅವರೆಲ್ಲರೂ ತಮ್ಮತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.


ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.


ಯೋನಾತಾನನು ತನ್ನ ಕೈಕಾಲುಗಳಿಂದ ಬೆಟ್ಟವನ್ನು ಹತ್ತಿದನು. ಅವನನ್ನು ಹಿಂಬಾಲಿಸಿಕೊಂಡು ಅವನ ಸಹಾಯಕನೂ ಬೆಟ್ಟವನ್ನು ಹತ್ತಿದನು. ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡಿದರು ಅವರು ಮೊದಲ ಆಕ್ರಮಣದಲ್ಲಿ ಅರ್ಧಎಕರೆ ಸ್ಥಳದಲ್ಲಿದ್ದ ಇಪ್ಪತ್ತು ಮಂದಿ ಫಿಲಿಷ್ಟಿಯರನ್ನು ಕೊಂದರು. ಆಕ್ರಮಣಮಾಡಲು ಬಂದವರೊಡನೆ ಯೋನಾತಾನನು ಮುಖಾಮುಖಿಯಾಗಿ ಹೋರಾಡಿದನು. ಯೋನಾತಾನನ ಸಹಾಯಕನು ಅವನ ಹಿಂದೆ ಬರುತ್ತಾ ಗಾಯಾಳುಗಳನ್ನು ಕೊಂದನು.


ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು. ಅವರು ಲೆಕ್ಕಹಾಕಿದಾಗ, ಯೋನಾತಾನನೂ ಅವನ ಸಹಾಯಕನೂ ಹೊರಗೆ ಹೋಗಿರುವುದು ತಿಳಿಯಿತು.


ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು.


ಹೀಗೆ ಸೌಲನು ಮತ್ತು ಅವನ ಮೂವರು ಗಂಡುಮಕ್ಕಳೂ ಮತ್ತು ಸೌಲನ ಆಯುಧವಾಹಕನೂ ಅದೇ ದಿನ ಸತ್ತುಹೋದರು.


ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಆ ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.


ಅಮ್ಮೋನಿಯನಾದ ಚೆಲೆಕ್, ಚೆರೂಯಳ ಮಗನಾದ ಯೋವಾಬನ ಸಹಾಯಕನೂ ಬೇರೋತ್ಯನೂ ಆದ ನಹರೈ,


ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಖಡ್ಗದಿಂದ ನನ್ನನ್ನು ಇರಿದು ಕೊಂದುಹಾಕು. ಆಗ ಪರದೇಶಿಯರು ಬಂದು ನನ್ನನ್ನು ಗಾಯಪಡಿಸಿ ಹಾಸ್ಯಮಾಡಲು ಸಾಧ್ಯವಾಗುವುದಿಲ್ಲ” ಎಂದನು. ಆದರೆ ಅವನ ಆಯುಧಹೊರುವವನು ಅದಕ್ಕೆ ಒಪ್ಪಲಿಲ್ಲ; ಸೌಲನನ್ನು ಕೊಲ್ಲಲು ಅವನು ಹೆದರಿದನು. ಆಗ ಸೌಲನು ತನ್ನ ಖಡ್ಗದ ಮೇಲೆ ತಾನೇ ಬಿದ್ದು ಸತ್ತನು.


ಅವನ ಆಯುಧ ಹೊರುವವನು ಸೌಲನು ಸತ್ತದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡನು.


ಅಮ್ಮೋನಿಯನಾದ ಚೆಲೆಕ; ಬೇರೋತ್ ಊರಿನವನಾದ ನಹರೈ; (ಇವನು ಚೆರೂಯಳ ಮಗನಾದ ಯೋವಾಬನ ಆಯುಧವಾಹಕನಾಗಿದ್ದನು)


ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.


ಸೌಲನು ಹಿಂದಿರುಗಿ ನೋಡಿದಾಗ ಅವನಿಗೆ ನಾನು ಕಾಣಿಸಿದೆನು. ಅವನು ನನ್ನನ್ನು ಕರೆದಾಗ, ‘ಇಗೋ ಬಂದೆನು’ ಎಂದು ಉತ್ತರಿಸಿದೆನು.


ಸೌಲನು ನನಗೆ, ‘ದಯವಿಟ್ಟು ನನ್ನನ್ನು ಕೊಂದುಬಿಡು. ನಾನು ಬಹು ಸಂಕಟದಲ್ಲಿದ್ದೇನೆ. ನಾನು ಈಗಾಗಲೇ ಸತ್ತವನಂತಿದ್ದೇನೆ’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು