Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:56 - ಪರಿಶುದ್ದ ಬೈಬಲ್‌

56 ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದು ಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ, ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರುಗಿ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:56
15 ತಿಳಿವುಗಳ ಹೋಲಿಕೆ  

ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು.


ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.


“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”


ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದ್ದರಿಂದ ಅವರೆಲ್ಲರೂ ತಮ್ಮತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು